ಚಿತ್ತಜನಯ್ಯನ ಚಿಂತಿಸು ಮನವೇ – ಸಾಹಿತ್ಯ

0Shares

ರಚನೆ: ಶ್ರೀಪಾದರಾಜರು

ಚಿತ್ತಜನಯ್ಯನ ಚಿಂತಿಸು ಮನವೇ
ಹೊತ್ತು ಕಳೆಯದೆ ಸರ್ವೋತ್ತಮನ ನೆನೆ ಮನವೆ || ಪ ||

ಕಾಲನ ದೂತರು ನೂಲು ಹಗ್ಗವ ತಂದು
ಕಾಲು ಕೈಗಳ ಕಟ್ಟಿ ಮ್ಯಾಲೆ ಕುಟ್ಟಿ
ಕಾಲಪಾಶದೊಳಿಟ್ಟು ಶೂಲದಿಂದಿರುವಾಗ
ಪಾಲಿಸುವರುಂಟೆ ಜಾಲವ ಮಾಡದೆ || ೧ ||

ದಂಡಧರನ ಭಟರು ಚಂಡಕೋಪದಿ ಬಂದು
ಕೆಂಡದ ನದಿಯ ತಡೆಗೆ ಕೊಂಡೊಯ್ದು
ಖಂಡಖಂಡವ ಕಿತ್ತು ಕೆಂಡದೊಳಿಡುವಾಗ
ಹೆಂಡಿರು ಮಕ್ಕಳು ಬಂದು ಬಿಡಿಸಬಲ್ಲರೆ ಮರುಳೆ || ೨ ||

ಅಂಗಳಿಗೆ ಡಬ್ಬಣಂಗಳ ಸೇರಿಸಿ ಎರಡು
ಕಂಗಳಿಗೆ ಸೀಸವ ಕಾಸಿ ಪೊಯ್ಯಲು
ತಂಗಿ ಅಕ್ಕ ಬಂದು ಭಂಗವ ಬಿಡಿಸುವರೆ
ಅಂಗವು ಸ್ಥಿರವಲ್ಲ ರಂಗವಿಠಲ ಬಲ್ಲ || ೩ ||

Click here for English lyrics

Sung By (ಗಾಯಕರು):  S Prabha Bhat (ಎಸ್ ಪ್ರಭಾ ಭಟ್)

0Shares
See also  ಬೇಡುವೆ ನಿನ್ನಡಿಯ ಸದಾಶಿವ - Beduve Ninnadiya Sadashiva Lyrics

Leave a Reply

error: Content is protected !!