ವೈಕುಂಠ ಏಕಾದಶಿ ಹಿನ್ನೆಲೆಯ ಮಹತ್ವ

0Shares

ವೈಕುಂಠ ಏಕಾದಶಿ ಇದರಲ್ಲಿ “ವೈಕುಂಠ”* ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

ವೈಕುಂಠ ಏಕಾದಶಿ

ಏಕಾದಶಿ ಎಂದರೆ ಚಾಂದ್ರಮಾನದ ಹನ್ನೊಂದನೆಯ ತಿಥಿ ಎಂದೂ ಸ್ಥೂಲವಾಗಿ ಹೇಳಬಹುದು. “ಏಕಾದಶಿ” ಒಂದು ವ್ರತ. ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು. ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು. ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು. ಅಂದರೆ ಶುಚಿರ್ ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ. ಇದರಿಂದ ಏಕಕಾಲಕ್ಕೆ ದೇಹಕ್ಕೆ ವಿಶ್ರಾಂತಿ, ಮನಸ್ಸಿಗೆ ಭಗವನ್ನಾಮ ಸ್ಮರಣೆಯಿಂದ ಶಾಂತಿ ದೊರೆಯುತ್ತದೆ. ಹೀಗೆ ಎಡಬಿಡದೆ ಏಕಾದಶಿ ವ್ರತ ಮಾಡುವುದರಿಂದ ದೇಹದ ಮತ್ತು ಮನಸ್ಸಿನ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು. ಮಹಾಕವಿ ಕಾಳಿದಾಸ ಹೇಳಿರುವಂತೆ:

“ಶರೀರಮಾಧ್ಯಂ ಖಲು ಧರ್ಮಸಾಧನಂ”, ಧರ್ಮ ಸಂಪಾದನೆಗೆ, ಸ್ವಸ್ಥ್ಯ ಶರೀರ ಅತ್ಯಗತ್ಯ.

ವೈಕುಂಠ ಏಕಾದಶಿಯ ಮಹತ್ವ:

ಕಾಮದಾ ಏಕಾದಶಿ, ಅಥವಾ ವೈಕುಂಠ ಏಕಾದಶಿ ಎಂದರೆ ಶ್ರೀಮನ್ನಾರಾಯಣ ವೈಕುಂಠದಿಂದ ಬಂದು ಭಕ್ತರಿಗೆ ದರುಶನದ ಭಾಗ್ಯ ಕೊಡುವ ದಿನ. ಮನುಷ್ಯರ ಪಾಪಗಳು ಶ್ರೀಹರಿಯನ್ನು ಸೇವಿಸುವುದರಿಂದ ಕಳೆಯುವ ದಿನ. ಮನುಜನ ಜೀವನದ ಪಯಣದಲಿ ಸಾಧನೆಗೆ ರಹದಾರಿ ಮಾಡಿಕೊಡುವ ದಿನ. ಈ ದಿನ ಮನದಲಿ ಏನೇ ಸಂಕಲ್ಪಿಸಿ ಅದೇ ದಾರಿಯಲಿ ಮುಂದುವರದರೆ ಯಶ ಪಡೆಯುತ್ತಾನೆ. ಉತ್ತರ ದ್ವಾರದಿಂದ ಸ್ವಾಮಿಯ ದರುಶನ ಮಾಡಿದರೆ ಮೋಕ್ಷ ಪ್ರಾಪ್ತಿ ಎಂದು ಹೇಳುತ್ತಾರೆ.

ಧಾರ್ಮಿಕ ಮಹತ್ವ:

  • ಅಂಬರೀಷ ಮಹರಾಜ ಏಕಾದಶಿ ಮಾಡಿ ಪಾರಣೆಯಂದು ತೀರ್ಥ ಸೇವಿಸಲು , ತಮಗೆ ಅವಮಾನಿಸಿದನೆಂದು ದೂರ್ವಾಸರು ಹತ್ತು ಜನ್ಮ ಪಡೆಯೆಂದು ಶಾಪ ಕೊಡುತ್ತಾರೆ ಆದರೆ ಏಕಾದಶಿ ಉಪವಾಸ ವ್ರತ ಮಾಡುತ್ತಿದ್ದ ಅಂಬರೀಷನ ಭಕ್ತಿಗೆ ಮೆಚ್ಚಿದ ಶ್ರೀ ನಾರಾಯಣನು ತಾನೇ ಆ ಶಾಪವನ್ನು ತೆಗೆದುಕೊoಡು 10 ಅವತಾರವೆತ್ತುತ್ತಾನೆ. ತನ್ನ ಭಕ್ತನ ರಕ್ಷಣೆಗಾಗಿ ತನ್ನ ಸುದರ್ಶನ ಚಕ್ರವನ್ನೆ ಕಳಿಸಿದ ಸುದರ್ಶನ ಚಕ್ರ ದೂರ್ವಾಸರ ಕಡೆಗೆ ಹೋದಾಗ, ಅಂಬರೀಷನೆ ಬೇಡಿಕೊoಡು ಅದು ತಿರುಗಿ ವಿಷ್ಣುವಿನ ಕಡೆಗೆ ಹೋಗುವಂತೆ ಮಾಡಬೇಕಾಯಿತು.
  • ಭಗವಾನ್ ವಿಷ್ಣು ಮೂರಾಸುರನನ್ನೂ ಏಕಾದಶಿ ಎಂಬ ಆಯುಧದಿಂದ ಕೊoದ ದಿನ.
  • ಭೀಷ್ಮಾಚಾರ್ಯರು ವಿಷ್ಣುಸಹಸ್ರನಾಮ ಹೇಳಿದ ದಿನ. ಮುಕ್ಕೋಟಿ ದೇವತೆಗಳಿಗೆ ವಿಷ್ಣು ದರ್ಶನ ಕೊಡುವ ದಿನ. ಆದ್ದರಿಂದ ಈ ಏಕದಾಶಿಗೆ ಬಹಳ ಮಹತ್ವವಿದೆ .
See also  ಬದರಿ ಕ್ಷೇತ್ರ ಮಹಾತ್ಮೆ

ವೈಜ್ಞಾನಿಕ ಕಾರಣ:

  • ಚಂದ್ರ ಭೂಮಿಗೆ ಸಾಮೀಪ್ಯ ಬಂದಾಗ ಅನೇಕ ಏರುಪೇರುಗಳಾಗುತ್ತವೆ. ಅದಕ್ಕೆ ನಮ್ಮ ಆರೋಗ್ಯ ಸರಿಯಾಗಿರಲೂ ಉಪವಾಸ ಮಾಡಬೇಕು.
  • ಓಮ್ ನಮೋ ನಾರಾಯಣನಾಯಃ ಎಂಬ ಮಂತ್ರ ನಮ್ಮ ನರನಾಡಿಗಳಲ್ಲಿ ಸಂಚರಿಸಿ ಎಲ್ಲೆಡೆ ರಕ್ತ ಸಂಚಾರ ಸರಿಯಾಗುವಂತೆ ಮಾಡುತ್ತದೆ.
  • ಮಂಗಳಮಯವಾದ ಶಾಲಗ್ರಾಮದ ತೀರ್ಥ ಸೇವಿಸುವುದರಿಂದ ಒಳ್ಳೆಯದಾಗುತ್ತದೆ .

ವೈಕುಂಠ ಏಕಾದಶಿಯ ಕಥೆ:

ಭಾಗವತೋತ್ತಮನಾದ ನಂದಗೋಪನು ಶ್ರೀಕೃಷ್ಣನ ಸಾನಿಧ್ಯದಲ್ಲಿ, ಏಕಾದಶಿಯ ಉಪವಾಸ ಹಾಗೂ ದ್ವಾದಶಿಯ ಪಾರಣೆಗಳನ್ನು ತಪ್ಪದೆ ಆಚರಿಸುತ್ತಿದ್ದನು. ಒಮ್ಮೆ ಏಕಾದಶಿವ್ರತ ಆಚರಿಸಿ, ಮರುದಿನ ದ್ವಾದಶಿ ಬಹು ಸ್ವಲ್ಪಕಾಲ ಮಾತ್ರ ಇದ್ದುದ್ದರಿಂದ ಬೆಳಗಿನ ಜಾವಕ್ಕೆ ಮೊದಲು ಯಮುನಾನದಿಯಲ್ಲಿ ಸ್ನಾನಕ್ಕಿಳಿದ. ಅದು ರಾಕ್ಷಸರ ಸಂಚಾರದ ಕಾಲವಾದ್ದರಿಂದ ವರುಣದೇವನ ಸೇವಕನಾದ ರಾಕ್ಷಸ, ನಂದಗೋಪನನ್ನು ವರುಣನ ಬಳಿಗೆ ಎಳೆದೊಯ್ದನು. ಇತ್ತ ನಂದನು ಎಷ್ಟು ಹೊತ್ತಾದರೂ ಸ್ನಾನಕ್ಕೆ ಹೋದವನು ಬಾರದಿರಲು, ಗೋಪಾಲಕುಲದವರೆಲ್ಲಾ ಬಲರಾಮಕೃಷ್ಣರಿಗೆ ಈ ಸುದ್ಧಿ ಮುಟ್ಟಿಸಿದರು. ಸರ್ವಜ್ಞನಾದ ಶ್ರೀಕೃಷ್ಣ ಅವರಿಗೆಲ್ಲಾ ಅಭಯವಿತ್ತು ತಂದೆಯವರನ್ನು ಕರೆತರುವುದಾಗಿ ಹೇಳಿ, ವರುಣಲೋಕಕ್ಕೆ ಬಂದನು. ದೇವದೇವನಾದ ಶ್ರೀಕೃಷ್ಣನಿಗೆ ನಮಿಸಿದ ವರುಣ ತನ್ನ ಸೇವಕನಿಂದಾದ ಅಪರಾಧ ಮನ್ನಿಸಬೇಕೆಂದು ಪ್ರಾರ್ಥಿಸಿದ. ಶ್ರೀಕೃಷ್ಣ ವರುಣನನ್ನು ಆಶೀರ್ವದಿಸಿ ತಂದೆಯೊಡನೆ ಗೋಕುಲಕ್ಕೆ ಹಿಂದಿರುಗಿದನು. ನಂದಗೋಪನಿಗೆ ಪರಮಾನಂದವಾಯಿತು. ವರುಣನ ಲೋಕದ ವೈಭವ ಹಾಗೂ ತನ್ನ ಮಗನಾದ ಶ್ರೀಕೃಷ್ಣನಿಗೆ ಸಿಕ್ಕ ಭವ್ಯಸ್ವಾಗತ ಮುಂತಾದವುಗಳನ್ನು ಎಳೆಎಳೆಯಾಗಿ ಬಣ್ಣಿಸಲಾಗಿ ಗೋಪಾಲರಿಗೆಲ್ಲಾ ಹೆಮ್ಮೆ ಎನಿಸಿತು ಆದರೆ ಶ್ರೀಕೃಷ್ಣ ಸಾಕ್ಷತ್ ಪರಮೇಶ್ವರನೇ ನಿಜ ಆದರೆ ಅವನ ನಿಜ ರೂಪ ಅರಿಯಲಾರೆವು ಎಂದು ಪರಿತಪಿಸಿದರು. ಇದನ್ನರಿತ ಕೃಷ್ಣ, ಎಲ್ಲರಿಗೂ ಯಮುನಾ ನದಿಯಲ್ಲಿದ್ದ ಬ್ರಹ್ಮಕುಂಡವೆಂಬ ಮಡುವಿನಲ್ಲಿ ಮುಳುಗಿಬರುವಂತೆ ತಿಳಿಸಿದ, ಅದರಂತೆ ಅವರೆಲ್ಲಾ ಮಾಡಲಾಗಿ ಅವರ ಕಣ್ಣಿಗೆ ವೈಕುಂಠ ಕಾಣಿಸಿತು, ಅವರ ಮನಸ್ಸು ತೃಪ್ತಿಯನ್ನು ಹೊಂದಿತು, ಶ್ರೀಕೃಷ್ಣನು ಪರದೈವವೆಂಬ ಅವರ ನಂಬಿಕೆ ಸ್ಥಿರವಾಯಿತು ಎಲ್ಲರೂ ಧನ್ಯರಾದರು ಬಹುಶಃ ಈ ಕಾರಣಕ್ಕೆ ಏಕಾದಶಿಯನ್ನು “ವೈಕುಂಠ ಏಕಾದಶಿ” ಎಂದು ಕರೆದಿರಬಹುದೆಂದು ಊಹಿಸಬಹುದು.

ಪುರಾಣಗಳಿಗೆ ಮಹತ್ವವಾದ ಸ್ಥಾನವಿದೆ, ಅವು ಜನಜೀವನಕ್ಕೆ ಹೊಂದಿಕೊಂಡು ಹೋಗುವ ವಿಷಯಗಳನ್ನು ಪ್ರತಿಪಾದಿಸುತ್ತವೆ. ಸಾಮಾನ್ಯಜನರಿಗೆ ಅವುಗಳಿಂದ ಉಪಕಾರವಾಗುತ್ತದೆ. ಲೋಕೋಪಕಾರಕ್ಕಾಗಿ ವ್ಯಾಸರು ಹದಿನೆಂಟು ಪುರಾಣಗಳನ್ನು ರಚಿಸಿದರು. ಇಂತಹ ಪುರಾಣಗಳಲ್ಲಿ ನಾರದೀಯ ಪುರಾಣ ಸಹ ಒಂದು ನಾರದರ ಪ್ರೇರಣೆಯಿಂದ ಅನೇಕ ಪವಿತ್ರ ಗ್ರಂಥಗಳ, ಪೂಜೆ ಪುನಸ್ಕಾರಗಳು, ವ್ರತಕಥೆಗಳೂ, ಈ ಜಗತ್ತಿಗೆ ಬಂದಿದೆ ಎಂದರೆ ಅತಿಶಯೋಕ್ತಿ ಆಗಲಾರದು, ಇಂತಹ ಪವಿತ್ರ ವ್ರತಗಳಲ್ಲಿ ಅತ್ಯಂತ ಶ್ರೇಷ್ಠವಾದ, ಶ್ರೇಯಸ್ಕರವಾದ, ಸಕಲರೂ ಸುಲಭದಲ್ಲಿ ಆಚರಿಸಲು ಯೋಗ್ಯವಾದ ವ್ರತ ಏಕಾದಶಿ ವ್ರತ. ಕೃಷ್ಣಾಮೃತಮಹಾರ್ಣವದ ಪ್ರಕಾರ, ಸಕಲ ತೀರ್ಥಕ್ಷೇತ್ರಗಳಿಂದ, ಸಕಲ ಪುಣ್ಯಕ್ಷೇತ್ರಗಳಿಂದ ಲಭಿಸಿದ ಪುಣ್ಯ, ಏಕಾದಶಿಗೆ ಸಮನಾಗಲಾರದು. ವಸಿಷ್ಠರ ಪ್ರಕಾರ, ಹನ್ನೊಂದು ಇಂದ್ರಿಯಗಳಿಂದ ಸಂಪಾದಿಸಿದ ಸಕಲಪಾಪಗಳನ್ನು ಹನ್ನೊಂದನೆಯ ತಿಥಿಯಾದ ಏಕಾದಶಿಯು ಪರಿಹರಿಸುತ್ತದೆ, ಆದ್ದರಿಂದ ಏಕಾದಶಿಗೆ ಸಮವಾದ ಪಾವನವಾದದ್ದು ಯಾವುದೂ ಇಲ್ಲ.

ವೈಕುಂಠ ದ್ವಾರ

ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು. ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ. ಅಲ್ಲದೇ ವೈಕುಂಠ ಏಕಾದಶಿಯ ಪವಿತ್ರ ದಿನ ಅಭ್ಯಂಜನ ಮಾಡಿ, ಶ್ರೀನಿವಾಸ ಉತ್ಸವ ಮೂರ್ತಿಯ ಜೋಕಾಲಿಗೆ ತಲೆ ತಾಕಿಸಿ, ವೈಕುಂಠದ್ವಾರದಿಂದ ಹೊರಬಂದರೆ ಮುಕ್ತಿ ಕಟ್ಟಿಟ್ಟ ಬುತ್ತಿ ಅನ್ನುವ ನಂಬಿಕೆಯೂ ಇದೆ. ಪುರಾಣಗಳಿಗೆ ಮಹತ್ವವಾದ ಸ್ಥಾನವಿದೆ, ಅವು ಜನಜೀವನಕ್ಕೆ ಹೊಂದಿಕೊಂಡು ಹೋಗುವ ವಿಷಯಗಳನ್ನು ಪ್ರತಿಪಾದಿಸುತ್ತವೆ. ಸಾಮಾನ್ಯಜನರಿಗೆ ಅವುಗಳಿಂದ ಉಪಕಾರವಾಗುತ್ತದೆ. ಲೋಕೋಪಕಾರಕ್ಕಾಗಿ ವ್ಯಾಸರು ಹದಿನೆಂಟು ಪುರಾಣಗಳನ್ನುರಚಿಸಿದರು. ಇಂತಹ ಪುರಾಣಗಳಲ್ಲಿ ನಾರದೀಯ ಪುರಾಣ ಸಹ ಒಂದು ನಾರದರ ಪ್ರೇರಣೆಯಿಂದ ಅನೇಕ ಪವಿತ್ರ ಗ್ರಂಥಗಳ, ಪೂಜೆ ಪುನಸ್ಕಾರಗಳು, ವ್ರತಕಥೆಗಳೂ, ಈ ಜಗತ್ತಿಗೆ ಬಂದಿದೆ ಎಂದರೆ ಅತಿಶಯೋಕ್ತಿ ಆಗಲಾರದು, ಇಂತಹ ಪವಿತ್ರ ವ್ರತಗಳಲ್ಲಿ ಅತ್ಯಂತ ಶ್ರೇಷ್ಠವಾದ, ಶ್ರೇಯಸ್ಕರವಾದ, ಸಕಲರೂಸುಲಭದಲ್ಲಿ ಆಚರಿಸಲು ಯೋಗ್ಯವಾದ ವ್ರತ ಏಕಾದಶಿ ವ್ರತ. ಕೃಷ್ಣಾಮೃತ ಮಹಾರ್ಣವದ ಪ್ರಕಾರ, ಸಕಲ ತೀರ್ಥಕ್ಷೇತ್ರಗಳಿಂದ, ಸಕಲ ಪುಣ್ಯಕ್ಷೇತ್ರಗಳಿಂದ ಲಭಿಸಿದ ಪುಣ್ಯ, ಏಕಾದಶಿಗೆ ಸಮನಾಗಲಾರದು. ವಸಿಷ್ಠರ ಪ್ರಕಾರ, ಹನ್ನೊಂದು ಇಂದ್ರಿಯಗಳಿಂದ ಸಂಪಾದಿಸಿದ ಸಕಲ ಪಾಪಗಳನ್ನುಹನ್ನೊಂದನೆಯ ತಿಥಿಯಾದ ಏಕಾದಶಿಯು ಪರಿಹರಿಸುತ್ತದೆ, ಆದ್ದರಿಂದ ಏಕಾದಶಿಗೆ ಸಮವಾದ ಪಾವನವಾದದ್ದು ಯಾವುದೂ ಇಲ್ಲ. ಅಲ್ಲದೇ ವೈಕುಂಠ ಏಕಾದಶಿಯ ಪವಿತ್ರ ದಿನ ಅಭ್ಯಂಜನ ಮಾಡಿ, ಶ್ರೀನಿವಾಸ ಉತ್ಸವ ಮೂರ್ತಿಯ ಜೋಕಾಲಿಗೆ ತಲೆ ತಾಕಿಸಿ, ವೈಕುಂಠದ್ವಾರದಿಂದ ಹೊರಬಂದರೆ ಮುಕ್ತಿ ಕಟ್ಟಿಟ್ಟ ಬುತ್ತಿ ಅನ್ನುವ ನಂಬಿಕೆಯೂ ಇದೆ.

See also  ಗೀತಾ ಜಯಂತಿ ಹಿನ್ನೆಲೆ ಮತ್ತು ಪ್ರಾಮುಖ್ಯತೆ

ಸ್ವಯಂಭು ವಿಷ್ಣು ದೇವಾಲಯಗಳು:

  • ತಿರುಪತಿಯ ಶ್ರೀ ವೆಂಕಟೇಶ್ವರಸ್ವಾಮಿ
  • ಶ್ರೀರಂಗoನ ಶ್ರೀ ರಂಗನಾಥಸ್ವಾಮಿ
  • ಮೇಲುಕೋಟೆಯ ಶ್ರೀಚೆಲುವನಾರಾಯಣಸ್ವಾಮಿ
  • ಕಾಂಚಿಪುರಂನ ವರದರಾಜಸ್ವಾಮಿ

ಈ ದೇವರ ದರ್ಶನ ಮಾಡಿದರೆ ಉತ್ತಮ ಅಥವಾ ಬೇರೆ ಯಾವುದೇ ವಿಷ್ಣುವಿನ ಮಂದಿರ ದರ್ಶನ ಮಾಡಬಹುದು.

0Shares

Leave a Reply

error: Content is protected !!